ಯೋಬ 30:3 - ಪರಿಶುದ್ದ ಬೈಬಲ್3 ಆ ಮನುಷ್ಯರು ಬಡಕಲಾಗಿದ್ದರು; ತಿನ್ನಲಿಕ್ಕಿಲ್ಲದೆ ಹಸಿವೆಯಿಂದಿದ್ದರು; ಅಡವಿಯ ಒಣಧೂಳನ್ನು ತಿನ್ನುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕೊರತೆಯಿಂದ, ಬರದಿಂದ ಅವರು ಸೊರಗಿಹೋಗಿದ್ದರು ನಿನ್ನೆಯವರೆಗೂ ಹಾಳುಬೀಳಾದ ನೆಲವನ್ನು ನೆಕ್ಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ಕೊರತೆಯಿಂದಲೂ ಹಸಿವಿನಿಂದಲೂ ಸೊರಗಿ ನಿನ್ನೆಯವರೆಗೂ ಹಾಳುಬೀಳಾಗಿದ್ದ ಒಣನೆಲವನ್ನು ನೆಕ್ಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು. ನಿರ್ಜನ ಮತ್ತು ಕತ್ತಲೆಯಾದ ಮರುಭೂಮಿಗಳ ಕಡೆಗೆ ಆಹಾರಕ್ಕಾಗಿ ಓಡಾಡುತ್ತಿದ್ದರು. ಅಧ್ಯಾಯವನ್ನು ನೋಡಿ |
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.