Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 30:30 - ಪರಿಶುದ್ದ ಬೈಬಲ್‌

30 ನನ್ನ ಚರ್ಮವು ಕಡುಕಪ್ಪಾಗಿದೆ. ನನ್ನ ದೇಹವು ಜ್ವರದಿಂದ ಬಿಸಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೇಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 30:30
11 ತಿಳಿವುಗಳ ಹೋಲಿಕೆ  

ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. ಅವರ ಚರ್ಮವು ಮರದಂತಾಗಿದೆ.


ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.


ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ.


ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.


ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು.


ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.


ನಾನು ಸಮಾಧಿಗೆ, ‘ನೀನೇ ನನ್ನ ತಂದೆ’ಯೆಂದು ಹುಳವಿಗೆ, ‘ನೀನೇ ನನ್ನ ತಾಯಿ, ನೀನೇ ನನ್ನ ತಂಗಿ’ ಎಂದು ಹೇಳುವುದಾದರೆ,


ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ.


ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. ಆ ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದುಹೋಗಿದೆ. ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. ನಾನು ಸದಾ ಬಳಲುತ್ತಿದ್ದೇನೆ.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು