ಯೋಬ 31:12 - ಪರಿಶುದ್ದ ಬೈಬಲ್12 ವ್ಯಭಿಚಾರವು ಸುಟ್ಟು ನಾಶಮಾಡುವ ಬೆಂಕಿಯಂತಿದೆ. ನಾನು ಹೊಂದಿರುವ ಪ್ರತಿಯೊಂದನ್ನು ಅದು ನಾಶಮಾಡಿಬಿಡುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದು ನಾಶ ಲೋಕದವರೆಗೂ ನುಂಗುವ ಬೆಂಕಿಯಾಗಿದ್ದು, ನನ್ನ ಆದಾಯವನ್ನೆಲ್ಲಾ ನಿರ್ಮೂಲಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನರಕ ಕೂಪದವರೆಗೆ ಬೆಂಕಿಯಾಗುತ್ತಿತ್ತು ನನ್ನ ಆದಾಯವನ್ನೆಲ್ಲ ನಿರ್ಮೂಲಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದು ನಾಶಲೋಕದವರೆಗೂ ನುಂಗುವ ಬೆಂಕಿಯಾಗಿದ್ದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.