ಯೋಬ 31:14 - ಪರಿಶುದ್ದ ಬೈಬಲ್14 ದೇವರು ನನ್ನನ್ನು ಮುಖಾಮುಖಿಯಾಗಿ ಸಂಧಿಸುವಾಗ ನಾನೇನು ಮಾಡಲಿ? ನಾನು ಮಾಡಿದ್ದಕ್ಕೆ ವಿವರಣೆ ಕೊಡುವಂತೆ ದೇವರು ನನ್ನನ್ನು ಕರೆಯುವಾಗ ನಾನೇನು ಉತ್ತರ ಕೊಡಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡೆನು? ಆತನು ವಿಚಾರಿಸುವಾಗ ಯಾವ ಉತ್ತರಕೊಟ್ಟೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರು ನ್ಯಾಯಸ್ಥಾಪನೆಗೆ ನಿಂತಾಗ ನಾನೇನು ಮಾಡುತ್ತಿದ್ದೆ? ಆತ ವಿಚಾರಣೆಗೆ ಬಂದಾಗ ನಾನೇನು ಉತ್ತರಕೊಡುತ್ತಿದ್ದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರು [ನ್ಯಾಯಸ್ಥಾಪನೆಗೆ] ಏಳುವಾಗ ನಾನು ಏನು ಮಾಡೇನು? ಆತನು ವಿಚಾರಿಸುವಾಗ ಯಾವ ಉತ್ತರ ಕೊಟ್ಟೇನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು? ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”