ಯೋಬ 31:15 - ಪರಿಶುದ್ದ ಬೈಬಲ್15 ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಹೊಟ್ಟೆಯಲ್ಲಿ ರೂಪಿಸಿದನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ? ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”