ಯೋಬ 31:18 - ಪರಿಶುದ್ದ ಬೈಬಲ್18 ನಾನು ನನ್ನ ಜೀವಮಾನವೆಲ್ಲಾ, ಅನಾಥರಿಗೆ ತಂದೆಯಂತಿದ್ದೆನು; ವಿಧವೆಯರನ್ನು ಪರಿಪಾಲಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯೋಪಾದಿಯಲ್ಲಿ ಅನಾಥನನ್ನು ಸಾಕುತ್ತಾ ನಾನು ಹುಟ್ಟಿದಂದಿನಿಂದಲೂ ಅನಾಥಳಿಗೆ ದಾರಿ ತೋರಿಸುತ್ತಾ ಇದ್ದೆನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು. ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”