ಯೋಬ 31:19 - ಪರಿಶುದ್ದ ಬೈಬಲ್19 ಬಟ್ಟೆಯಿಲ್ಲದೆ ಸಂಕಟಪಡುತ್ತಿರುವವರನ್ನೂ ಮೇಲಂಗಿಯಿಲ್ಲದ ಬಡವರನ್ನೂ ನಾನು ಕಂಡಾಗಲೆಲ್ಲಾ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಟ್ಟೆಯಿಲ್ಲದ ಬಡವನನು ನೋಡಿದಾಗಲೆಲ್ಲಾ ಹೊದಿಕೆಯಿಲ್ಲದೆ ನಡುಗುವುದನು ಕಂಡಾಗಲೆಲ್ಲಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ, ಹೊದಿಕೆ ಇಲ್ಲದೆ ನಡುಗುವವರನ್ನೂ ನಾನು ನೋಡಿದಾಗೆಲ್ಲಾ, ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”
ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.