ಯೋಬ 31:20 - ಪರಿಶುದ್ದ ಬೈಬಲ್20 ಅವರಿಗೆ ಬಟ್ಟೆಗಳನ್ನು ಕೊಟ್ಟೆನು. ನನ್ನ ಕುರಿಗಳ ಉಣ್ಣೆಯಿಂದ ಅವರ ಮೈಯನ್ನು ಬೆಚ್ಚಗೆ ಮಾಡಿದೆನು. ಅವರು ನನ್ನನ್ನು ಪೂರ್ಣಹೃದಯದಿಂದ ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ ನಾನು ಹರಸಲ್ಪಡಲಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ, ತಮ್ಮ ಅಂತರಾಳದಿಂದ ನನ್ನನ್ನು ಹರಸಲಿಲ್ಲವೋ? ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”