ಯೋಬ 31:26 - ಪರಿಶುದ್ದ ಬೈಬಲ್26 ಪ್ರಕಾಶಮಾನವಾದ ಸೂರ್ಯನನ್ನಾಗಲಿ ಸುಂದರವಾದ ಚಂದ್ರನನ್ನಾಗಲಿ ನಾನೆಂದೂ ಪೂಜಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪ್ರಕಾಶಮಯ ಸೂರ್ಯನನು ನೋಡಿ ಕಾಂತಿಯುತ ಚಂದ್ರನ ಚಲನೆಯನು ದಿಟ್ಟಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸೂರ್ಯನು ಪ್ರಕಾಶಿಸುವದನ್ನಾಗಲಿ ಚಂದ್ರನು ಕಳೆದುಂಬಿದವನಾಗಿ ಚರಿಸುವದನ್ನಾಗಲಿ ನಾನು ನೋಡಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ, ಅಧ್ಯಾಯವನ್ನು ನೋಡಿ |
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು.