ಯೋಬ 31:28 - ಪರಿಶುದ್ದ ಬೈಬಲ್28 ನಾನು ಅವುಗಳಲ್ಲಿ ಯಾವುದನ್ನೇ ಮಾಡಿದ್ದರೂ ನನಗೆ ಶಿಕ್ಷೆಯಾಗುತ್ತಿತ್ತು. ಯಾಕೆಂದರೆ ಆಗ ನಾನು ಸರ್ವಶಕ್ತನಾದ ದೇವರಿಗೆ ಅಪನಂಬಿಗಸ್ತನಾಗುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದು ಕೂಡ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು ಮೇಲಣ ಲೋಕದ ದೇವರಿಗೆ ದ್ರೋಹವೆಸಗಿದಂತಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದು ಸಹ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾದದ್ದು, ಮೇಲಣ ಲೋಕದ ದೇವರಿಗೆ ದ್ರೋಹಿಯಾದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು; ಏಕೆಂದರೆ, ಆಗ ನಾನು ಉನ್ನತದಲ್ಲಿರುವ ದೇವರಿಗೆ ದ್ರೋಹಿಯಾಗುತ್ತಿದ್ದೆನು. ಅಧ್ಯಾಯವನ್ನು ನೋಡಿ |
ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.