Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:29 - ಪರಿಶುದ್ದ ಬೈಬಲ್‌

29 “ನನ್ನ ವೈರಿಗಳು ನಾಶವಾದಾಗ ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶನಕ್ಕೆ ಹಿಗ್ಗಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:29
10 ತಿಳಿವುಗಳ ಹೋಲಿಕೆ  

ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.


ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.


ಅವರು ಬಹಳ ದುಃಖದಿಂದ ಅತ್ತರು. ಅವರು ಸಂಜೆಯ ತನಕ ಏನನ್ನೂ ತಿನ್ನಲಿಲ್ಲ. ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಜನರೂ ಸತ್ತದ್ದಕ್ಕಾಗಿ ಮತ್ತು ಇಸ್ರೇಲಿಗಾಗಿ ದಾವೀದನು ಮತ್ತು ಅವನ ಜನರು ಅತ್ತರು. ಸೌಲನನ್ನೂ ಅವನ ಮಗನಾದ ಯೋನಾತಾನನನ್ನೂ ಮತ್ತು ಅನೇಕ ಮಂದಿ ಇಸ್ರೇಲರನ್ನೂ ಖಡ್ಗಗಳಿಂದ ಇರಿದು ಕೊಂದದ್ದಕ್ಕಾಗಿ ಅವರು ಅತ್ತರು.


ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು