Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:32 - ಪರಿಶುದ್ದ ಬೈಬಲ್‌

32 ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪರಸ್ಥಳದವನು ಬಯಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೆಯ ಬಾಗಿಲುಗಳನ್ನು ತೆರೆದಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪರಸ್ಥಳದವನು ಬೈಲಿನಲ್ಲಿ ಇಳಿದುಕೊಳ್ಳಲಿಲ್ಲವಲ್ಲಾ, ದಾರಿಗೆ ನನ್ನ ಮನೇಬಾಗಲುಗಳನ್ನು ತೆರೆದಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:32
16 ತಿಳಿವುಗಳ ಹೋಲಿಕೆ  

ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಗುಣುಗುಟ್ಟದೆ ಅತಿಥಿಸತ್ಕಾರ ಮಾಡಿರಿ.


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.


ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.


ನಾನು ಬಡವರಿಗೆ ತಂದೆಯಂತಿದ್ದೆನು. ತೊಂದರೆಯಲ್ಲಿದ್ದ ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು