Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:33 - ಪರಿಶುದ್ದ ಬೈಬಲ್‌

33 ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಜನಸಮುದಾಯಕ್ಕೆ ನಾನು ಹೆದರಿದ್ದರೆ ಕುಲೀನರ ತಿರಸ್ಕಾರಕ್ಕೆ ನಾನು ಬೆದರಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಾನು ಜನಸಮುದಾಯಕ್ಕೆ ಹೆದರಿದ್ದರಿಂದಾಗಲಿ ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಾನು ಹೃದಯದಲ್ಲಿ ನನ್ನ ಅಪರಾಧ ಪ್ರಜ್ಞೆಯನ್ನು ಅಡಗಿಸಿ, ಮಾನವರಂತೆ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:33
11 ತಿಳಿವುಗಳ ಹೋಲಿಕೆ  

ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.


ಪೇತ್ರನು ಆಕೆಗೆ, “ನಿಮ್ಮ ಜಮೀನಿನಿಂದ ನಿಮಗೆ ಎಷ್ಟು ಹಣ ಬಂತೆಂದು ನನಗೆ ಹೇಳು. ಇಷ್ಟೇ ಹಣವೋ?” ಎಂದು ಕೇಳಿದನು. ಸಫೈರಳು, “ಹೌದು, ಅಷ್ಟೇ!” ಎಂದು ಹೇಳಿದಳು.


ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.


ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.


ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.


ನಾನು ಅಪರಿಚಿತರನ್ನು ನನ್ನ ಮನೆಗೆ ಯಾವಾಗಲೂ ಆಹ್ವಾನಿಸುತ್ತಿದ್ದೆನು. ಆದ್ದರಿಂದ ರಾತ್ರಿಯಲ್ಲಿ ಅವರು ಬೀದಿಗಳಲ್ಲಿ ಮಲಗಿಕೊಳ್ಳಬೇಕಾಗಿರಲಿಲ್ಲ.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು