ಯೋಬ 31:34 - ಪರಿಶುದ್ದ ಬೈಬಲ್34 ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ; ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ; ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಾನು ಬಾಗಲು ದಾಟದೆ ಮೌನವಾಗಿದ್ದು ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಜಿ ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ? ಅಧ್ಯಾಯವನ್ನು ನೋಡಿ |