ಯೋಬ 31:7 - ಪರಿಶುದ್ದ ಬೈಬಲ್7 ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ, ಅಧ್ಯಾಯವನ್ನು ನೋಡಿ |
ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.