ಯೋಬ 32:19 - ಪರಿಶುದ್ದ ಬೈಬಲ್19 ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ದಲಿಯಂತೆ ನನ್ನ ಹೊಟ್ಟೆಯು ಒಡೆದುಹೋಗುವ ಸ್ಥಿತಿಯಲ್ಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದ್ರಾಕ್ಷಾರಸ ತುಂಬಿ ಬಾಯಿಕಟ್ಟಿದ ಹೊಸಬುದ್ದಲಿಯಂತೆ ನನ್ನ ಅಂತರಂಗವು ಬಿರಿದು ಒಡೆದುಹೋಗುವ ಹಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ; ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಇದೆ. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.