ಯೋಬ 32:21 - ಪರಿಶುದ್ದ ಬೈಬಲ್21 ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’