Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:4 - ಪರಿಶುದ್ದ ಬೈಬಲ್‌

4 ಅಲ್ಲಿದ್ದವರೆಲ್ಲರಲ್ಲಿ ಎಲೀಹು ಚಿಕ್ಕವನಾಗಿದ್ದನು. ಆದ್ದರಿಂದ ಪ್ರತಿಯೊಬ್ಬರು ಮಾತಾಡಿ ಮುಗಿಸುವವರೆಗೆ ಅವನು ಕಾದುಕೊಂಡಿದ್ದನು. ಬಳಿಕ ಅವನಿಗೆ ತಾನೂ ಮಾತಾಡಬಹುದೆನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಮಿತ್ರರು ತನಗಿಂತ ಹಿರಿಯವರಾಗಿದ್ದುದರಿಂದ ಎಲೀಹುವನು ಮೊದಲೇ ಮಾತನಾಡದೆ ಈವರೆಗೂ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ತನಗಿಂತ ವೃದ್ಧರಾಗಿದ್ದ ಕಾರಣ ಎಲೀಹು ಯೋಬನೊಂದಿಗೆ ಮೊದಲು ಮಾತಾಡದೆ ತಡೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಲೀಹು, ಯೋಬನ ಮಾತುಗಳು ಮುಗಿಯುವವರೆಗೂ ಕಾದಿದ್ದನು. ಏಕೆಂದರೆ ಅವನಿಗಿಂತ ಅವರೆಲ್ಲರೂ ಹಿರಿಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:4
6 ತಿಳಿವುಗಳ ಹೋಲಿಕೆ  

ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.


ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.


ಯೋಬನ ಮೂವರು ಸ್ನೇಹಿತರ ಬಾಯಲ್ಲಿ ಉತ್ತರವಿಲ್ಲದಿರುವುದನ್ನು ಕಂಡು ಎಲೀಹು ಕೋಪಗೊಂಡನು.


“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ಬಟ್ಟೆಯನ್ನು ಹರಿಯುವ ಸಮಯ, ಬಟ್ಟೆಯನ್ನು ಹೊಲಿಯುವ ಸಮಯ. ಮೌನವಾಗಿರುವ ಸಮಯ, ಮಾತಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು