Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:16 - ಪರಿಶುದ್ದ ಬೈಬಲ್‌

16 ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಕಿವಿಗಳನ್ನು ತೆರೆದು ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಮನುಷ್ಯರ ಕಿವಿಗಳನ್ನು ತೆರೆದು, ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:16
14 ತಿಳಿವುಗಳ ಹೋಲಿಕೆ  

ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು.


ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.


ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ.


ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.


ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು.


ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.


ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.


ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ.


ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು