Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:18 - ಪರಿಶುದ್ದ ಬೈಬಲ್‌

18 ಮರಣದ ಸ್ಥಳಕ್ಕೆ ಹೋಗುತ್ತಿರುವ ಜನರನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಕೆ ಕೊಡುತ್ತಾನೆ. ನಾಶವಾಗುತ್ತಿರುವವನನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು ಅವನ ಜೀವವನ್ನು ದೈವಾಸ್ತ್ರದಿಂದ ಅಳಿದುಹೋಗದ ಹಾಗೆ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ, ಅವನ ಜೀವವನ್ನು ಖಡ್ಗದಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:18
12 ತಿಳಿವುಗಳ ಹೋಲಿಕೆ  

ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


‘ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ


ಅವನಿಗೆ ಸಾವು ಸಮೀಪವಾಗಿದೆ; ಅವನ ಜೀವವು ಪಾತಾಳಕ್ಕೆ ಹತ್ತಿರವಾಗಿದೆ.


ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.


ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ.


ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು.


ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು