Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:25 - ಪರಿಶುದ್ದ ಬೈಬಲ್‌

25 ಅವನ ದೇಹವು ಬಾಲ್ಯದಂತೆ ಕೋಮಲವಾಗುವುದು; ಯೌವನಪ್ರಾಯದಂತೆ ದೃಢಕಾಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನ ದೇಹ ಬಾಲ್ಯಕ್ಕಿಂತಲೂ ಕೋಮಲವಾಗುವುದು ಎಳೆತನದ ಚೈತನ್ಯವನ್ನು ಮತ್ತೆ ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವದು, ಅವನು ಪುನಃ ಎಳೆಯತನದ ದಿನಗಳನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ; ಅವನು ಪುನಃ ತನ್ನ ಯೌವನದ ದಿನಗಳಿಗೆ ಹಿಂದಿರುಗಲಿ,’ ಎಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:25
8 ತಿಳಿವುಗಳ ಹೋಲಿಕೆ  

ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ.


ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.


ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ.


ಆ ಮೇಲೆ ಯೋಬನು ನೂರನಲವತ್ತು ವರ್ಷಗಳ ಕಾಲ ಬದುಕಿದ್ದನು. ಅವನು ತನ್ನ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಮರಿಮಕ್ಕಳನ್ನೂ ಮರಿಮೊಮ್ಮಕ್ಕಳನ್ನೂ ಮರಿಮೊಮ್ಮಕ್ಕಳಿಗೆ ಹುಟ್ಟಿದ ಮಕ್ಕಳನ್ನೂ ಕಣ್ಣಾರೆಕಂಡನು.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


‘ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ


ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; ಆತನ ಮುಂದೆ ನೀತಿವಂತನಾಗಿ ಜೀವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು