ಯೋಬ 33:26 - ಪರಿಶುದ್ದ ಬೈಬಲ್26 ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; ಆತನ ಮುಂದೆ ನೀತಿವಂತನಾಗಿ ಜೀವಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ ಆತನ ದರ್ಶನ ಮಾಡಿ ಉತ್ಸಾಹಧ್ವನಿಗೈದು ತಿರಿಗಿ ಆತನಿಂದ ನೀತಿವಂತನೆನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು. ಅಧ್ಯಾಯವನ್ನು ನೋಡಿ |
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.