Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:27 - ಪರಿಶುದ್ದ ಬೈಬಲ್‌

27 ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:27
30 ತಿಳಿವುಗಳ ಹೋಲಿಕೆ  

ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ನಾನು ಮಾಡುವ ಕೆಟ್ಟಕಾರ್ಯಗಳನ್ನು ಮಾಡಲು ನನಗೆ ಇಷ್ಟವಿಲ್ಲದಿದ್ದರೆ, ಧರ್ಮಶಾಸ್ತ್ರವು ಒಳ್ಳೆಯದೆಂದು ನಾನು ಒಪ್ಪಿಕೊಂಡಂತಾಯಿತು.


“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.


ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.


ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ.


ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ?


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ.


ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.


ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.


ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ.


ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು