Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:29 - ಪರಿಶುದ್ದ ಬೈಬಲ್‌

29-30 “ಅವನನ್ನು ಎಚ್ಚರಿಸಿ ಅವನ ಆತ್ಮವನ್ನು ಪಾತಾಳದಿಂದ ರಕ್ಷಿಸಬೇಕೆಂದೂ ಜೀವನದ ಸುಖವನ್ನು ಅವನು ಮತ್ತೆ ಅನುಭವಿಸಲೆಂದೂ ದೇವರು ಈ ಕಾರ್ಯಗಳನ್ನು ಪದೇಪದೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇದನ್ನೆಲ್ಲ ನೀಡುವನು ಆ ದೇವರೇ ಇಮ್ಮಡಿ ಮುಮ್ಮಡಿಯಾಗಿ ನೀಡುವನು ಮನುಜನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಜೀವಲೋಕದ ಬೆಳಕನ್ನು ಅನುಭವಿಸುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೋಡು, ದೇವರು ಎರಡು ಸಾರಿಯಲ್ಲದೆ, ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮನುಷ್ಯರಿಗಾಗಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:29
10 ತಿಳಿವುಗಳ ಹೋಲಿಕೆ  

ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ದೇವರು ಜನರಲ್ಲಿ ಮಾಡುವ ಕಾರ್ಯಗಳಿಗೂ ವಿವಿಧ ಮಾರ್ಗಗಳಿವೆ. ಆದರೆ ಅವುಗಳೆಲ್ಲಾ ಒಬ್ಬನೇ ದೇವರಿಂದ ಬಂದಂಥವುಗಳಾಗಿವೆ.


ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.


ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.


ಇಸ್ರೇಲಿನ ರಾಜನು ತನ್ನ ಜನರಿಗೆ ಸಂದೇಶವೊಂದನ್ನು ಕಳುಹಿಸಿ, ದೇವಮನುಷ್ಯನು ಎಚ್ಚರವಾಗಿರಲು ತಿಳಿಸಿದ ಸ್ಥಳದಲ್ಲಿ ತಿರುಗಾಡದಿರುವಂತೆ ಸೂಚಿಸಿ ಕೆಲವು ಜನರನ್ನು ರಕ್ಷಿಸಿದನು.


ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು.


ನಾನು ಒಂದು ಸಲ ಮಾತಾಡಿದ್ದೇನೆ; ಆದರೆ ಪ್ರತಿವಾದ ಮಾಡಲಾರೆನು. ನಾನು ಎರಡು ಸಲ ಮಾತಾಡಿದ್ದೇನೆ; ಆದರೆ ನಾನು ಹೆಚ್ಚಿಗೆ ಏನೂ ಹೇಳಲಾರೆನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು