Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:4 - ಪರಿಶುದ್ದ ಬೈಬಲ್‌

4 ದೇವರಾತ್ಮನು ನನ್ನನ್ನು ನಿರ್ಮಿಸಿದನು. ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನ ಶ್ವಾಸದಿಂದುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:4
11 ತಿಳಿವುಗಳ ಹೋಲಿಕೆ  

ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ಆದರೆ ಜೀವವು ನನ್ನೊಳಗಿರುವ ತನಕ, ದೇವರ ಜೀವಶ್ವಾಸವು ನನ್ನ ಮೂಗಿನಲ್ಲಿ ಇರುವವರೆಗೆ,


“ಮೊದಲನೆ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ. ಆದರೆ ಕೊನೆಯ ಆದಾಮನು (ಕ್ರಿಸ್ತನು) ಜೀವಕೊಡುವ ಜೀವಾತ್ಮನಾದನು.


ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ.


ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?


ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.


ನಿನ್ನ ಜೀವಶ್ವಾಸವನ್ನು ಊದುವಾಗ ಅವು ಸೃಷ್ಟಿಯಾಗುತ್ತವೆ. ನೀನು ಭೂಮಿಯನ್ನು ಮತ್ತೆ ನೂತನ ಪಡಿಸುವೆ.


ನಿಜದೇವರಾದ ಯೆಹೋವನು ಹೀಗೆನ್ನುತ್ತಾನೆ: ಆಕಾಶವನ್ನು ನಿರ್ಮಿಸಿ ಅದನ್ನು ಭೂಮಿಯ ಮೇಲೆ ಹರಡಿದಾತನು ಯೆಹೋವನೇ. ಭೂಮಿಯ ಮೇಲಿರುವದನ್ನೆಲ್ಲಾ ಸೃಷ್ಟಿಸಿದಾತನು ಯೆಹೋವನೇ. ಭೂಮಿಯ ಮೇಲಿರುವ ಮನುಷ್ಯರಿಗೆಲ್ಲಾ ಜೀವಶ್ವಾಸವನ್ನು ಕೊಟ್ಟವನು ಆತನೇ. ಭೂಮಿಯ ಮೇಲೆ ನಡೆಯುವ ಪ್ರತಿಯೊಬ್ಬನಿಗೂ ಪ್ರಾಣವನ್ನು ಕೊಟ್ಟವನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು