Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:9 - ಪರಿಶುದ್ದ ಬೈಬಲ್‌

9 ‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನೂ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:9
24 ತಿಳಿವುಗಳ ಹೋಲಿಕೆ  

ನಾನು ಯಾರೊಡನೆಯೂ ಕ್ರೂರವಾಗಿ ವರ್ತಿಸಲಿಲ್ಲ. ನನ್ನ ವಿಜ್ಞಾಪನೆಯು ನಿರ್ಮಲವಾಗಿತ್ತು.


ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!


ಯೋಬನೇ, ನೀನು ದೇವರಿಗೆ, ‘ನನ್ನ ವಾದಗಳು ಸರಿಯಾಗಿವೆ, ನಿನ್ನ ದೃಷ್ಟಿಯಲ್ಲಿ ನಾನು ಶುದ್ಧನಾಗಿರುವೆ’ ಎಂದು ಹೇಳಿದೆಯಲ್ಲವೇ?


ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು.


ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.


ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.


ನೀತಿವಂತರು ಇದನ್ನು ಕಂಡು ಗಲಿಬಿಲಿಗೊಂಡಿದ್ದಾರೆ. ನಿರಪರಾಧಿಗಳು ದೇವದೂಷಕರ ವಿಷಯದಲ್ಲಿ ಗಲಿಬಿಲಿಗೊಂಡಿದ್ದಾರೆ.


ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪು ಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು.


ನನ್ನ ಪರವಾಗಿ ವಾದಿಸಲು ಈಗ ಸಿದ್ಧವಾಗಿದ್ದೇನೆ. ನಾನು ನಿರಪರಾಧಿಯೆಂದು ನನಗೆ ಗೊತ್ತದೆ.


ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ.


ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ?


ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.


ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”


ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ.


ನನ್ನ ಪಾಪಗಳನ್ನು ಚೀಲದಲ್ಲಿಟ್ಟು ಮುದ್ರಿಸಿ ದೂರಕ್ಕೆ ಎಸೆದುಬಿಡುವೆ.


“ಆದರೆ ಯೋಬನೇ, ನೀನು ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:


ಯೋಬನು ಹೇಳುವುದೇನೆಂದರೆ, ‘ನಾನು ನಿರಪರಾಧಿ. ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಆದರೆ ನನ್ನ ಪ್ರತಿಯೊಂದು ಹೆಜ್ಜೆಯನ್ನೂ ದೇವರು ಬಲ್ಲನು. ಆತನು ನನ್ನನ್ನು ಪರೀಕ್ಷಿಸಿ ನೋಡಿದಾಗ ನಾನು ಅಪ್ಪಟ ಬಂಗಾರದಂತಿರುವುದನ್ನು ಕಂಡುಕೊಳ್ಳುವನು.


ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.


ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’


“ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು