ಯೋಬ 34:20 - ಪರಿಶುದ್ದ ಬೈಬಲ್20 ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲೇ ಸಾಯುವರು, ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.” ಅಧ್ಯಾಯವನ್ನು ನೋಡಿ |
“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.