Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:24 - ಪರಿಶುದ್ದ ಬೈಬಲ್‌

24 ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾವ ವಿಮರ್ಶೆಯೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:24
17 ತಿಳಿವುಗಳ ಹೋಲಿಕೆ  

ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ.


ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ.


ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.


“ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನ್ನು ಜಜ್ಜುವಿರಿ?


ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು.


ಯೆಹೋವನು ಇಸ್ರೇಲಿಗೆ ಹೊಸ ರಾಜನನ್ನು ನೇಮಿಸುತ್ತಾನೆ. ಆ ಹೊಸ ರಾಜನು ಯಾರೊಬ್ಬಾಮನ ಕುಟುಂಬವನ್ನು ನಾಶಗೊಳಿಸುತ್ತಾನೆ. ಇದು ಬಹುಬೇಗನೆ ಸಂಭವಿಸುತ್ತದೆ.


ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


“ಇನ್ನೊಬ್ಬನ ದಾಸಿಯಾಗಿರುವ ಸ್ತ್ರೀಯೊಡನೆ ಒಬ್ಬನು ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ, ಈ ದಾಸಿಯು ಹಣದಿಂದಾಗಲಿ ಉಚಿತವಾಗಿಯಾಗಲಿ ಬಿಡುಗಡೆಯಾಗಲು ಸಾಧ್ಯವಿಲ್ಲದಿದ್ದರೆ ಅವರಿಬ್ಬರಿಗೆ ಶಿಕ್ಷೆ ವಿಧಿಸಬೇಕು. ಆದರೆ ಅವರಿಗೆ ಮರಣ ಶಿಕ್ಷೆಯಾಗಬಾರದು. ಯಾಕೆಂದರೆ ಸ್ತ್ರೀಯು ಸ್ವತಂತ್ರಳಾಗಿಲ್ಲ.


“ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು