ಯೋಬ 34:29 - ಪರಿಶುದ್ದ ಬೈಬಲ್29 ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು? ಅಧ್ಯಾಯವನ್ನು ನೋಡಿ |
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.