Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:36 - ಪರಿಶುದ್ದ ಬೈಬಲ್‌

36 ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು. ಯಾಕೆಂದರೆ ಅವನು ದುಷ್ಟನಂತೆ ಉತ್ತರಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವನ ಪರಿಶೋಧನೆ ಇನ್ನೂ ಮುಂದುವರೆದರೆ ಒಳಿತು ಅವನು ಕೊಟ್ಟ ಉತ್ತರ ದುರುಳರಿಗೆ ತಕ್ಕುದಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:36
10 ತಿಳಿವುಗಳ ಹೋಲಿಕೆ  

ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


“ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?


ನನ್ನ ಹೃದಯವನ್ನು ಕುಂದಿಸಿದವನೂ ದೇವರೇ. ನನ್ನನ್ನು ಭಯಭ್ರಾಂತನನ್ನಾಗಿ ಮಾಡಿದವನೂ ಸರ್ವಶಕ್ತನಾದ ದೇವರೇ.


“ಯೋಬನೇ, ದುಷ್ಟರು ನಡೆಯುವ ಹಳೆದಾರಿಯ ಮೇಲೆ ನೀನು ನಡೆಯುತ್ತಲೇ ಇರುವಿಯೋ?


ದುಷ್ಟರು ದೀರ್ಘಕಾಲ ಜೀವಿಸುವುದೇಕೆ? ಅವರು ವೃದ್ಧರಾಗುವವರೆಗೂ ಅಭಿವೃದ್ಧಿಯಾಗುತ್ತಾ ಬಾಳುವುದೇಕೆ?


ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.


ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು