Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:6 - ಪರಿಶುದ್ದ ಬೈಬಲ್‌

6 ನಾನು ನೀತಿವಂತನಾಗಿದ್ದರೂ ಅಪರಾಧಿಯೆನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ ನಿರ್ದೋಷಿಯಾಗಿದ್ದರೂ ನನಗೆ ದೇವರ ಪೆಟ್ಟು ಬಾಣಬಿಟ್ಟಂತಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ, ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ ಎಂದು ಹೇಳಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನಲ್ಲಿ ನ್ಯಾಯವಿದ್ದರೂ ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; ನಾನು ನಿರ್ದೋಷಿಯಾಗಿದ್ದರೂ ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:6
5 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು ಕುಡಿಯುತ್ತಿದೆ. ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ಆತನ ಬಿಲ್ಲುಗಾರರು ನನ್ನ ಸುತ್ತಲೆಲ್ಲಾ ಇದ್ದಾರೆ. ಆತನು ನಿಷ್ಕರುಣೆಯಿಂದ ನನ್ನ ಅಂತರಂಗಗಳಿಗೆ ಬಾಣವನ್ನು ಎಸೆಯುತ್ತಾನೆ; ನೆಲದ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.


ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.


‘ಯೋಬನಾದ ನಾನು ಪರಿಶುದ್ಧನು; ನಾನು ನಿರಪರಾಧಿ; ನಾನು ಯಾವ ತಪ್ಪನ್ನೂ ಮಾಡಲಿಲ್ಲ; ನಾನು ದೋಷಿಯಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು