ಯೋಬ 34:9 - ಪರಿಶುದ್ದ ಬೈಬಲ್9 ಯಾಕೆಂದರೆ, ‘ದೇವರಿಗೆ ವಿಧೇಯನಾಗಿರುವವನಿಗೆ ಅದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಅವನೇ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ ಅವನಿಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.” ಅಧ್ಯಾಯವನ್ನು ನೋಡಿ |
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.