ಯೋಬ 35:10 - ಪರಿಶುದ್ದ ಬೈಬಲ್10 ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಸೃಷ್ಟಿಕರ್ತನಾದ ದೇವರು ಎಲ್ಲಿ, ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡಮಾಡುತ್ತಾನಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ? ಅಧ್ಯಾಯವನ್ನು ನೋಡಿ |
ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.
‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.