ಯೋಬ 36:10 - ಪರಿಶುದ್ದ ಬೈಬಲ್10 ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಶಿಕ್ಷಣ ಕೇಳುವಂತೆ ಅವರ ಕಿವಿಯನ್ನು ತೆರೆಯುವನು ಅಧರ್ಮವನ್ನು ಬಿಟ್ಟುಬಿಡುವಂತೆ ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಯನ್ನು ತೆರೆದು ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು. ಅಧ್ಯಾಯವನ್ನು ನೋಡಿ |
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.