Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:15 - ಪರಿಶುದ್ದ ಬೈಬಲ್‌

15 ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು, ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:15
10 ತಿಳಿವುಗಳ ಹೋಲಿಕೆ  

ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು.


ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕೆಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”


ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು.


“ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.”


ದೇವರ ಆಧರಣೆಯ ಮಾತುಗಳೂ ನಮ್ಮ ನಯವಾದ ಮಾತುಗಳೂ ನಿನಗೆ ಸಾಲುವುದಿಲ್ಲವೇ?


ಆತನು ಅವರ ಕಿವಿಗಳಲ್ಲಿ ಮಾತಾಡಬಹುದು. ಆಗ ಅವರು ದೇವರ ಎಚ್ಚರಿಕೆಗಳಿಂದ ಬಹು ಭಯಗೊಳ್ಳುವರು.


ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು ಸಂಕಟಪಡುತ್ತಿದ್ದರೆ,


ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.


ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.


ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು