ಯೋಬ 36:2 - ಪರಿಶುದ್ದ ಬೈಬಲ್2 “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ತಾಳು, ನಾನು ಹೇಳುವುದನು ಇನ್ನೂ ಸ್ವಲ್ಪ ಕೇಳು ದೇವರ ಪರವಾಗಿ ಹೇಳತಕ್ಕವು ಇನ್ನು ಕೆಲವುಂಟು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸ್ವಲ್ಪ ತಾಳು, ನಾನು ತಿಳಿಸುತ್ತೇನೆ, ದೇವರ ಪಕ್ಷವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವುಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.