Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:20 - ಪರಿಶುದ್ದ ಬೈಬಲ್‌

20 ಜನಾಂಗಗಳು ಇದ್ದಕ್ಕಿದ್ದಂತೆ ಕಾಣೆಯಾಗುವ ರಾತ್ರಿಗಾಗಿ ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜನಾಂಗಗಳು ತಟ್ಟನೆ ನಿರ್ಮೂಲವಾಗುವಾಗ ಅವರ ವಿರುದ್ಧ ಪಾಪಮಾಡದಂತೆ, ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತಟ್ಟನೆ ಜನಾಂಗಗಳು ನಿರ್ಮೂಲವಾಗುವಂಥ ರಾತ್ರಿಯನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜನಾಂಗಗಳು ತಟ್ಟನೆ ನಿರ್ಮೂಲವಾಗುವ ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:20
16 ತಿಳಿವುಗಳ ಹೋಲಿಕೆ  

ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು.


ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.


ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.


ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.


ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


“ನಿನ್ನ ಕೋಪವು ಇಳಿಯುವ ತನಕ ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟಿದ್ದು, ನೀನು ಗೊತ್ತುಪಡಿಸಿದ ಸಮಯದಲ್ಲಿ ನನ್ನನ್ನು ಜ್ಞಾಪಿಸಿಕೊಂಡಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು.


ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು.


ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!


ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು