Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:32 - ಪರಿಶುದ್ದ ಬೈಬಲ್‌

32 ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಿಡಿಲನ್ನೇ ಕೈತುಂಬ ಹಿಡಿದು ಗುರಿಮುಟ್ಟಲೆಂದು ಆಜ್ಞೆಯಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆ ಎಂದು ಅದನ್ನು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:32
12 ತಿಳಿವುಗಳ ಹೋಲಿಕೆ  

ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.


ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ ಆತನು ಮರೆಯಾದನು.


ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ?


ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ.


ದೇವರು ತನ್ನ ಮೋಡಗಳನ್ನು ಹರಡಿ ಪೂರ್ಣಚಂದ್ರನನ್ನು ಮರೆಮಾಡುವನು.


ದೇವರು ಮೋಡಗಳಲ್ಲಿ ನೀರು ತುಂಬಿಸುವನು. ಆತನು ತನ್ನ ಮಿಂಚನ್ನು ಮೋಡಗಳಲ್ಲೆಲ್ಲಾ ಹರಡುವನು.


ಯೋಬನೇ, ನೀನು ಸಿಡಿಲಿಗೆ ಆಜ್ಞಾಪಿಸಬಲ್ಲೆಯಾ? ಅದು ನಿನ್ನ ಬಳಿಗೆ ಬಂದು, ‘ಇಗೋ ಬಂದಿದ್ದೇನೆ; ತಮಗೇನಾಗಬೇಕು’ ಎನ್ನುವುದೇ?


ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು