Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:33 - ಪರಿಶುದ್ದ ಬೈಬಲ್‌

33 ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದರ ಆರ್ಭಟವು ಆತನನ್ನು ಪ್ರಕಟಿಸುತ್ತದೆ ಆತನ ಆಗಮನವನು ದನಕರುಗಳಿಗೂ ತಿಳಿಸುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವದು, ದನಗಳು ಸಹ ಆತನ ಆಗಮನವನ್ನು ತಿಳಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:33
9 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ.


ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.


ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.


ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು.


ಯೆಹೋವನು ಆಕಾಶದಿಂದ ಗುಡುಗಿದನು! ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು.


“ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ.


ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು