ಯೋಬ 36:7 - ಪರಿಶುದ್ದ ಬೈಬಲ್7 ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕೂತುಕೊಳ್ಳುವ ಉನ್ನತಪದವಿಗೆ ಅವರನ್ನು ತರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು. ಅಧ್ಯಾಯವನ್ನು ನೋಡಿ |
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.