Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:2 - ಪರಿಶುದ್ದ ಬೈಬಲ್‌

2 ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಗುಡುಗುಟ್ಟುವ ಆತನ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಮೊಳಗನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ. ದೇವರ ಬಾಯಿಂದ ಹೊರಡುವ ಮಾತನ್ನು ಲಕ್ಷ್ಯಕೊಟ್ಟು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:2
13 ತಿಳಿವುಗಳ ಹೋಲಿಕೆ  

ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ.


ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು.


ನೀನು ಆಜ್ಞಾಪಿಸಲು ನೀರು ಹಿಂತಿರುಗಿತು. ನೀನು ಬರ್ಜಿಸಲು ನೀರು ಓಡಿಹೋಯಿತು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:


ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು.


ಯೆಹೋವನು ಆಕಾಶದಿಂದ ಗುಡುಗಿದನು! ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು.


“ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ.


ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು!


ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.


ಮಳೆಯನ್ನೂ ಗುಡುಗುಸಿಡಿಲುಗಳ ಮಳೆಯನ್ನೂ ಎಲ್ಲಿಗೆ ಕಳುಹಿಸಬೇಕೆಂದು ನಿರ್ಧರಿಸಿದಾಗಲೂ


ನಿನ್ನ ತೋಳುಗಳು ನನ್ನ ತೋಳುಗಳಂತೆ ಬಲಿಷ್ಠವಾಗಿವೆಯೋ? ನಿನ್ನ ಸ್ವರವನ್ನು ನನ್ನ ಸ್ವರದಂತೆ ಗಟ್ಟಿಯಾಗಿ ಗುಡುಗುಟ್ಟಿಸಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು