Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:9 - ಪರಿಶುದ್ದ ಬೈಬಲ್‌

9 ದಕ್ಷಿಣ ದಿಕ್ಕಿನಿಂದ ಬಿರುಗಾಳಿಯೂ ಉತ್ತರ ದಿಕ್ಕಿನಿಂದ ಚಳಿಗಾಳಿಯೂ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರ ಭಂಡಾರದಿಂದ ಬಿರುಗಾಳಿ ಬೀಸುತ್ತದೆ ಉತ್ತರ ದಿಕ್ಕಿನಿಂದ ಚಳಿ ಹೊರಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನ ಭಂಡಾರದಲ್ಲಿಂದ ಬಿರುಗಾಳಿಯೂ ಉತ್ತರದಿಕ್ಕಿನಿಂದ ಚಳಿಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಕ್ಷಿಣದಿಕ್ಕಿನಿಂದ ಬಿರುಗಾಳಿಯು ಬೀಸುತ್ತದೆ. ಉತ್ತರದಿಂದ ಚಳಿಯೂ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:9
7 ತಿಳಿವುಗಳ ಹೋಲಿಕೆ  

“ಆತನೇ ಬೇರ್, ಒರೈಯನ್ ಮತ್ತು ಪ್ಲೈಯಡ್ಸ್ ಎಂಬ ನಕ್ಷತ್ರಸಮೂಹಗಳನ್ನು ಸೃಷ್ಟಿಮಾಡಿದನು. ದಕ್ಷಿಣ ಆಕಾಶದಲ್ಲಿ ನಕ್ಷತ್ರವ್ಯೂಹಗಳನ್ನು ಸೃಷ್ಟಿಸಿದವನು ಆತನೇ.


ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ನೆಗೆವ್ ಮೂಲಕ ಬೀಸುವ ಬಿರುಗಾಳಿಯಂತೆ ಮರುಭೂಮಿಯಿಂದಲೂ ಭಯಂಕರ ದೇಶದಿಂದಲೂ ಒಬ್ಬನು ದಂಡೆತ್ತಿ ಬರುವನು.


ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:


ಆತನು ಆಕಾಶದಿಂದ ಕಲ್ಲುಗಳಂತಿರುವ ಆಲಿಕಲ್ಲನ್ನು ಸುರಿಸುವನು; ಯಾವನೂ ಚಳಿಯಲ್ಲಿ ಹೊರಗಡೆ ಇರಲಾರನು.


ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು