Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:10 - ಪರಿಶುದ್ದ ಬೈಬಲ್‌

10 ನಾನು ಸಮುದ್ರಕ್ಕೆ ಮೇರೆಯನ್ನು ನಿಗದಿಪಡಿಸಿ ಕದ ಹಾಕಿದ ಬಾಗಿಲುಗಳ ಹಿಂಭಾಗದಲ್ಲಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಸರಹದ್ದನು ನಿಯಮಿಸಿ ಕದಗಳನೂ ಅಗುಳಿಗಳನೂ ಇಟ್ಟವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಎಲ್ಲೆಯನ್ನು ಕಟ್ಟಿ ಅಗುಳಿ ಕದಗಳನ್ನು ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಸಮುದ್ರಕ್ಕೆ ಮಿತಿಗಳನ್ನು ನಿಗದಿಪಡಿಸಿ, ಅಗುಳಿಗಳನ್ನೂ, ಬಾಗಿಲುಗಳನ್ನೂ ಇಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:10
10 ತಿಳಿವುಗಳ ಹೋಲಿಕೆ  

ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


ನೀನು ಸಮುದ್ರಗಳಿಗೆ ಮೇರೆಗಳನ್ನು ಗೊತ್ತುಪಡಿಸಿರುವುದರಿಂದ ನೀರಿನಿಂದ ಭೂಮಿಯು ಮತ್ತೆಂದಿಗೂ ಆವೃತವಾಗದು.


ದೇವರು ಸಮುದ್ರದ ಮೇಲೆ ಬೆಳಕು ಮತ್ತು ಕತ್ತಲೆಗಳು ಸಂಧಿಸುವ ಸ್ಥಳದಲ್ಲಿ ಕ್ಷಿತಿಜವನ್ನು ಗಡಿರೇಖೆಯನ್ನಾಗಿ ಎಳೆದಿದ್ದಾನೆ.


ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.


ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.


ಆ ಸಮಯದಲ್ಲಿ ನಾನು ಸಮುದ್ರವನ್ನು ಮೋಡಗಳಿಂದ ಮುಚ್ಚಿ ಕಾರ್ಗತ್ತಲನ್ನು ಬಟ್ಟೆಯಂತೆ ಸುತ್ತಿಟ್ಟೆನು.


ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.


ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.


ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು