Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:12 - ಪರಿಶುದ್ದ ಬೈಬಲ್‌

12 “ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ ಮುಂಜಾನೆಗಾಗಲಿ ಹಗಲಿಗಾಗಲಿ ಆರಂಭವಾಗೆಂದು ಆಜ್ಞಾಪಿಸಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಜೀವಮಾನದಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಜೀವಮಾನದಲ್ಲಿ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದಿಯಾ? ಭೂವಿುಯ ಅಂಚುಗಳನ್ನು ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ? ಮುಂಜಾನೆಯ ಬೆಳಗಿಗೆ ಅದರ ಸ್ಥಳವನ್ನು ತಿಳಿಯಪಡಿಸಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:12
14 ತಿಳಿವುಗಳ ಹೋಲಿಕೆ  

ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ.


ಯಾಕೆಂದರೆ, ನಾವು ಕೇವಲ ನಿನ್ನೆ ಹುಟ್ಟಿದವರಂತಿದ್ದೇವೆ. ನಮಗೇನೂ ಗೊತ್ತಿಲ್ಲ. ಭೂಮಿಯ ಮೇಲಿನ ನಮ್ಮ ದಿನಗಳು ನೆರಳಿನಂತೆ ಕ್ಷಣಿಕವಷ್ಟೇ.


ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


“ನಮ್ಮ ದೇವರ ಮಹಾಕರುಣೆಯಿಂದ ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.


ಯೋಬನೇ, ಇವು ನಿನಗೆ ತಿಳಿದಿವೆ, ಯಾಕೆಂದರೆ ನೀನು ಬಹು ವೃದ್ಧನೂ ಜ್ಞಾನಿಯೂ ಆಗಿರುವೆ. ನಾನು ಅವುಗಳನ್ನು ನಿರ್ಮಿಸಿದಾಗ ನೀನು ಅಲ್ಲಿ ವಾಸವಾಗಿರಲಿಲ್ಲವೇ?


“ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.


“ಯೋಬನೇ, ಎಲ್ಲರಿಗಿಂತ ಮೊದಲು ನೀನೇ ಹುಟ್ಟಿರುವುದಾಗಿ ಭಾವಿಸಿಕೊಂಡಿರುವಿಯಾ? ಬೆಟ್ಟಗಳಿಗಿಂತ ಮೊದಲೇ ನೀನು ಹುಟ್ಟಿದಿಯಾ?


ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.


ಯೋಬನೇ, ದುಷ್ಟರನ್ನು ಅವರು ಅಡಗಿಕೊಂಡಿರುವ ಸ್ಥಳಗಳಲ್ಲಿ ಹಿಡಿದು ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ?


ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು