ಯೋಬ 38:16 - ಪರಿಶುದ್ದ ಬೈಬಲ್16 “ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂವಿುಯ ಕೆಳಗಣ ಸಾಗರದ ಗುಪ್ತಪ್ರದೇಶಗಳಲ್ಲಿ ತಿರುಗಾಡಿದ್ದೀಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ? ಅಧ್ಯಾಯವನ್ನು ನೋಡಿ |
ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.