Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:2 - ಪರಿಶುದ್ದ ಬೈಬಲ್‌

2 “ನನ್ನ ಉದ್ದೇಶಗಳನ್ನು ಮೂರ್ಖತನದ ಮಾತುಗಳಿಂದ ಗಲಿಬಿಲಿಗೊಳಿಸುತ್ತಿರುವ ಈ ಮನುಷ್ಯನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅಜ್ಞಾನದ ಮಾತುಗಳಿಂದ ನನ್ನ ಯೋಜನೆಗಳನ್ನು ಮಂಕುಮಾಡುವ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:2
9 ತಿಳಿವುಗಳ ಹೋಲಿಕೆ  

ಯೆಹೋವನೇ, ‘ಈ ಮೂರ್ಖ ಸಂಗತಿಗಳನ್ನು ಹೇಳುತ್ತಿರುವ ಈ ಮೂಢನು ಯಾರು?’ ಎಂದು ನೀನು ಪ್ರಶ್ನಿಸಿದೆ. ನನಗೆ ಅರ್ಥವಾಗಿಲ್ಲದ ಸಂಗತಿಗಳ ಬಗ್ಗೆಯೂ ನಾನು ತಿಳಿಯಲಾಗದಷ್ಟು ಆಶ್ಚರ್ಯಕರವಾದ ಅದ್ಭುತಕಾರ್ಯಗಳ ಬಗ್ಗೆಯೂ ನಾನು ಮಾತಾಡಿದ್ದೇನೆ.


ಆದ್ದರಿಂದ ಯೋಬನು ತನ್ನ ನಿಷ್ಪ್ರಯೋಜಕ ಮಾತನ್ನು ಮುಂದುವರಿಸುತ್ತಿದ್ದಾನೆ; ದುರಾಭಿಮಾನದಿಂದ ವರ್ತಿಸುತ್ತಿದ್ದಾನೆ; ತಿಳುವಳಿಕೆಯಿಲ್ಲದೆ ಮಾತಾಡುತ್ತಿದ್ದಾನೆ.”


ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ.


‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ. ಅವನ ಮಾತುಗಳಿಗೆ ಅರ್ಥವೇ ಇಲ್ಲ!’


“ನಾನು ನಿಮಗೆ ದೇವರ ಶಕ್ತಿಯ ಬಗ್ಗೆ ಉಪದೇಶಿಸುವೆನು. ಸರ್ವಶಕ್ತನಾದ ದೇವರ ಆಲೋಚನೆಗಳನ್ನು ನಾನು ನಿಮಗೆ ಮರೆಮಾಡುವುದಿಲ್ಲ.


ಹೌದು, ಅಜ್ಞಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ! ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ.


“ಇದು ನಿಜವಲ್ಲದಿದ್ದರೆ, ನಾನು ಸುಳ್ಳು ಹೇಳಿರುವುದಾಗಿ ಯಾರು ನಿರೂಪಿಸಬಲ್ಲರು? ನನ್ನ ಮಾತುಗಳು ತಪ್ಪಾದವುಗಳೆಂದು ಯಾರು ತೋರಿಸಬಲ್ಲರು?”


ಆದರೆ ನನ್ನ ಮನಸ್ಸು ನಿಮ್ಮ ಮನಸ್ಸಿನಂತೆಯೇ ಒಳ್ಳೆಯದಾಗಿದೆ. ನಾನು ನಿಮ್ಮಂತೆಯೇ ಬುದ್ಧಿವಂತನಾಗಿರುವೆ. ಇದು ಸತ್ಯವೆಂದು ಯಾರು ಬೇಕಾದರೂ ತಿಳಿದುಕೊಳ್ಳಬಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು