Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:23 - ಪರಿಶುದ್ದ ಬೈಬಲ್‌

23 ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ಕಾಲಕ್ಕಾಗಿಯೂ ನಾನು ಅವುಗಳನ್ನು ಕೂಡಿಸಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯೋ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:23
11 ತಿಳಿವುಗಳ ಹೋಲಿಕೆ  

ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”


ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು.


“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.


ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ.


“ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?


ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟುಬರುವ ಸ್ಥಳಕ್ಕೂ ನೀನು ಎಂದಾದರೂ ಹೋಗಿರುವಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು