Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:37 - ಪರಿಶುದ್ದ ಬೈಬಲ್‌

37 ಮೋಡಗಳನ್ನು ಲೆಕ್ಕಿಸಿ ಮಳೆ ಸುರಿಸಲು ಅವುಗಳನ್ನು ಮೊಗಚಿಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯಾರಿಗಿದೆ ಮೋಡಗಳನು ಲೆಕ್ಕಿಸುವ ಶಕ್ತಿ? ಆಕಾಶದಲ್ಲಿನ ಬುದ್ದಲಿಗಳನು ಮೊಗಚಿಹಾಕುವ ಬುದ್ಧಿಶಕ್ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಮೋಡಗಳನ್ನು ಎಣಿಸುವ ಜ್ಞಾನ ಯಾರಿಗೆ ಇದೆ? ಆಕಾಶದಲ್ಲಿನ ಬುದ್ದಲಿಗಳನ್ನು ಸಾಗಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:37
8 ತಿಳಿವುಗಳ ಹೋಲಿಕೆ  

ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.


ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


“ಯೋಬನೇ, ನೀನು ಮೋಡಗಳಿಗೆ ಮಹಾಧ್ವನಿಯಿಂದ ಆಜ್ಞಾಪಿಸಿ ಅವು ನಿನ್ನನ್ನು ದೊಡ್ಡ ಮಳೆಯಿಂದ ಆವರಿಸಿಕೊಳ್ಳುವಂತೆ ಮಾಡಬಲ್ಲೆಯಾ?


ಧೂಳನ್ನು ಮಣ್ಣನ್ನಾಗಿಯೂ ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಮಾಡುವ ಜ್ಞಾನಿ ಯಾರು?


ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು