Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:8 - ಪರಿಶುದ್ದ ಬೈಬಲ್‌

8 “ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿ ಬರುವ ಸಮುದ್ರದ ನೀರನ್ನು ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಮುದ್ರವು ಗರ್ಭವನ್ನು ಭೇದಿಸಿಕೊಂಡು ಬರಲು ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಭೂಗರ್ಭವನ್ನು ನುಗ್ಗಿಕೊಂಡು ಬಂದ, ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:8
13 ತಿಳಿವುಗಳ ಹೋಲಿಕೆ  

ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.


ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.


ಆತನು ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ನಿರ್ಮಿಸಿದನು; ಮಹಾಸಾಗರಕ್ಕೆ ಸ್ಥಳವನ್ನು ಗೊತ್ತುಪಡಿಸಿದನು.


ನಾನು ಸಮುದ್ರಕ್ಕೆ ಮೇರೆಯನ್ನು ನಿಗದಿಪಡಿಸಿ ಕದ ಹಾಕಿದ ಬಾಗಿಲುಗಳ ಹಿಂಭಾಗದಲ್ಲಿಟ್ಟೆನು.


ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.


ಆತನು ಗಾಳಿಗೆ ಶಕ್ತಿಯನ್ನು ಕೊಟ್ಟಾಗಲೂ ಸಾಗರಗಳ ವಿಸ್ತೀರ್ಣವನ್ನು ನಿರ್ಧರಿಸಿದಾಗಲೂ


ಆ ಸಮಯದಲ್ಲಿ ನಾನು ಸಮುದ್ರವನ್ನು ಮೋಡಗಳಿಂದ ಮುಚ್ಚಿ ಕಾರ್ಗತ್ತಲನ್ನು ಬಟ್ಟೆಯಂತೆ ಸುತ್ತಿಟ್ಟೆನು.


ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು.


ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?


ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು?


ಯೆಹೋವನು ಮಾಡಬಲ್ಲ ಕಾರ್ಯಗಳನ್ನು ಅವರು ನೋಡಿದರು. ಆತನು ಸಮುದ್ರದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಅವರು ಕಣ್ಣಾರೆ ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು