Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:10 - ಪರಿಶುದ್ದ ಬೈಬಲ್‌

10 ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಟ್ಟಬಲ್ಲೆಯಾ ಅದನು ಹಗ್ಗದಿಂದ ನೇಗಿಲ ಸಾಲಿಗೆ ಕುಂಟೆ ಎಳೆಯಲು ಅದು ನಿನ್ನ ಹಿಂದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೇಗಿಲಸಾಲಿಗೆ ತಪ್ಪದಂತೆ ಅದನ್ನು ಹಗ್ಗದಿಂದ ಕಟ್ಟುವಿಯಾ? ಅದು ತಗ್ಗಿನ ಭೂವಿುಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:10
10 ತಿಳಿವುಗಳ ಹೋಲಿಕೆ  

ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.


ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.


ನೀನು ಪಕ್ಷಿಯೊಂದಿಗೆ ಆಟವಾಡುವಂತೆ ಅದರ ಜೊತೆಯಲ್ಲಿ ಆಟವಾಡುವಿಯಾ? ನಿನ್ನ ದಾಸಿಯರು ಅದರೊಂದಿಗೆ ಆಟವಾಡಲೆಂದು ಹಗ್ಗದಿಂದ ಅದನ್ನು ಕಟ್ಟಿಹಾಕುವಿಯಾ?


ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ.


“ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು?


ಆಗ ಸೇವಕನೊಬ್ಬನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುತ್ತಿದ್ದವು; ಕತ್ತೆಗಳು ಸಮೀಪದಲ್ಲಿ ಹುಲ್ಲನ್ನು ಮೇಯುತ್ತಿದ್ದವು.


ದೇವರು ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡು ಕೋಣದಂತೆ ಬಲಿಷ್ಠರಾಗಿದ್ದಾರೆ.


“ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ?


ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು